Advertisement

ವೃದ್ಧೆಗೆ ಡಿಜಿಟಲ್ ಅರೆಸ್ಟ್ – ಬರೋಬ್ಬರಿ 24 ಕೋಟಿ ರೂ. ದೋಚಿದ ಸೈಬರ್ ವಂಚಕರು

[ad_1]

Cyber Crime 1

ಬೆಂಗಳೂರು: ಮನಿ ಲಾಂಡರಿಂಗ್ (Money Laundering)  ಹೆಸರಲ್ಲಿ ಡಿಜಿಟಲ್ ಅರೆಸ್ಟ್ (Digital Arrest) ಮಾಡಿ ಸೈಬರ್ ವಂಚಕರು ವೃದ್ಧೆ ಬಳಿ 24 ಕೋಟಿ ರೂ. ದೋಚಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ಶಿವಾಜಿನಗರ ನಿವಾಸಿಯಾಗಿರುವ ವೃದ್ಧೆ ಲಕ್ಷ್ಮೀ ರಾಮಮೂರ್ತಿಗೆ ಡಿಜಿಟಲ್ ಅರೆಸ್ಟ್ ಮಾಡಲಾಗಿದೆ. ಆಸ್ತಿ ಮಾರಿದ್ದರಿಂದ ವೃದ್ಧೆಗೆ ಕೋಟ್ಯಂತರ ರೂ. ಹಣ ಬಂದಿತ್ತು. ಇವರ ಬ್ಯಾಂಕ್ ಟ್ರಾನ್ಸಾಕ್ಷನ್ ಬಗ್ಗೆ ಮಾಹಿತಿ ತಿಳಿದ ಸೈಬರ್ ವಂಚಕರು ಕಳೆದ ಜನವರಿಯಿಂದ ಮೇವರೆಗೆ ಮನಿ ಲಾಂಡರಿಂಗ್ ಹೆಸರಲ್ಲಿ ಡಿಜಿಟಲ್ ಅರೆಸ್ಟ್ ಮಾಡಿದ್ದಾರೆ. ಬರೋಬ್ಬರಿ 24 ಕೋಟಿ ಸೈಬರ್ ವಂಚಕರ ಪಾಲಾಗಿದೆ. ಇದನ್ನೂ ಓದಿ: ಭಾಗ್ಯಶ್ರೀ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್: ನೀಟ್ ಬರೆದಿದ್ದ ವಿದ್ಯಾರ್ಥಿನಿ ಪಿಯುಸಿಯಲ್ಲೇ ಫೇಲ್!

24 ಕೋಟಿ ಕೊಟ್ಟರೂ ಇನ್ನೂ ಹಣ ಕೊಡಬೇಕು ಎಂದು ವಂಚಕರು ತಾಕೀತು ಮಾಡಿಕೊಂಡಿದ್ದರು. ಹೀಗಾಗಿ ವೃದ್ಧೆ ಮನೆಯಲ್ಲಿದ್ದ 1.30 ಕೆಜಿ ಚಿನ್ನದ ಒಡೆವೆ ಅಡ ಇಡಲು ಬ್ಯಾಂಕ್‌ಗೆ ಬಂದಿದ್ದರು. ಅಡ ಇಟ್ಟು ಹಣವನ್ನ ವಂಚಕರಿಗೆ ನೀಡಲು ಬಂದಿದ್ದರು. ಇದನ್ನು ಗಮನಿಸಿದ್ದ ಕಂಟೋನ್ಮೆಂಟ್ ಬ್ರಾಂಚ್ ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಬ್ಯಾಂಕ್‌ಗೆ ತೆರಳಿದ್ದ ಸಿಸಿಬಿ ಸೈಬರ್ ಪೊಲೀಸರ ತಂಡ ಬ್ಯಾಂಕ್‌ನಲ್ಲಿ ವೃದ್ಧೆ ಲಕ್ಷ್ಮೀ ರಾಮಮೂರ್ತಿಯನ್ನು ವಿಚಾರಿಸಿದ್ದಾರೆ. ಆಗಲೂ ವೃದ್ಧೆ ಘಟನೆ ಬಗ್ಗೆ ಬಾಯಿ ಬಿಡಲು ರೆಡಿ ಇರಲಿಲ್ಲ. ಕೊನೆಗೆ ಪೊಲೀಸ್ ಭಾಷೆಯಲ್ಲಿ ಕೇಳಿದಾಗ ಡಿಜಿಟಲ್ ಅರೆಸ್ಟ್ ಮಾಡಿದ್ರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊಪ್ಪಳದಲ್ಲಿ ಭಾರೀ ಮಳೆ – ರಸ್ತೆಗೆ ಬಿದ್ದ ಮರಕ್ಕೆ ಬೈಕ್‌ ಡಿಕ್ಕಿ, ಯುವಕ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ!

ಬಳಿಕ ನೊಂದ ವೃದ್ದೆಯಿಂದ ದೂರು ಪಡೆದು ಕೇಸ್ ದಾಖಲಿಸಿದ್ದ ಸಿಸಿಬಿ ಸೈಬರ್ ಪೊಲೀಸರು ವಿದೇಶದಲ್ಲಿರುವ ವೃದ್ಧೆ ಮಕ್ಕಳಿಗೆ ಡಿಜಿಟಲ್ ಅರೆಸ್ಟ್ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂಬೈ, ಅಲಹಬಾದ್, ದೆಹಲಿ ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಗೌರವ್ ಕುಮಾರ್, ಓಂ ಪ್ರಕಾಶ್ ರಾಜಪೂತ್ ಸೇರಿದಂತೆ ಐದು ಮಂದಿಯನ್ನು ಸೈಬರ್ ಪೊಲೀಸರು ಅರೆಸ್ಟ್ ಮಾಡಿ ತನಿಖೆ ಮುಂದುವರೆಸಿದ್ದಾರೆ. ಸೈಬರ್ ಖದೀಮರು 22 ಅಕೌಂಟ್‌ಗೆ ಹಣ ವರ್ಗಾವಣೆ ಮಾಡಿದ್ದಾರೆ. ಇದುವರೆಗೂ 60 ಲಕ್ಷ ಹಣ ಇರುವ ಬ್ಯಾಂಕ್ ಅಕೌಂಟ್ ಸೀಜ್ ಮಾಡಲಾಗಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಧಾರಾಕಾರ ಮಳೆ – ಮಂತ್ರಾಲಯದಲ್ಲಿ ಕಲ್ಯಾಣ ಮಂಟಪ ತೆರೆದು ಭಕ್ತರಿಗೆ ವಸತಿ


[ad_2]

Source link publictv.in

Leave a Reply

Your email address will not be published. Required fields are marked *