Advertisement

ದಾವಣಗೆರೆ | ಕ್ಷುಲ್ಲಕ ಕಾರಣಕ್ಕೆ ಬಿಕಾಂ ವಿದ್ಯಾರ್ಥಿಗೆ ಚಾಕು ಇರಿತ, ಸ್ಥಿತಿ ಗಂಭೀರ

[ad_1]

CRIME 16

ದಾವಣಗೆರೆ: ಗೆಳೆಯರ ಮೇಲೆ ಹಲ್ಲೆ ನಡೆಸಿದ್ದನ್ನು ಪ್ರಶ್ನಿಸಿದ ಬಿಕಾಂ ವಿದ್ಯಾರ್ಥಿಗೆ (Student) ದುಷ್ಕರ್ಮಿಗಳು ಚಾಕು ಇರಿದ ಘಟನೆ ದಾವಣಗೆರೆ (Davanagere) ನಗರದ ವಿಜಯನಗರ ಬಡಾವಣೆಯಲ್ಲಿ ನಡೆದಿದೆ.

ಚಾಕು ಇರಿತಕ್ಕೊಳಗಾದ ಯುವಕನನ್ನು ಮನೋಜ್ (19) ಎಂದು ಗುರುತಿಸಲಾಗಿದೆ. ಈತ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿಕಾಂ ಓದುತ್ತಿದ್ದ. ಮನೋಜ್ ಗೆಳೆಯರು ಹುಟ್ಟುಹಬ್ಬ ಆಚರಣೆಗೆ ತೆರಳಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಮನೋಜ್ ಗೆಳೆಯರ ಮೇಲೆ ಮತ್ತೊಂದು ಗ್ಯಾಂಗ್‌ ಹಲ್ಲೆ ಮಾಡಿತ್ತು. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ತೆರಳಿದ್ದ ಮನೋಜ್, ಯಾವ ಕಾರಣಕ್ಕೆ ಹಲ್ಲೆ ಮಾಡಿದ್ದೀರಿ ಎಂದು ಕೇಳಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಇದನ್ನೂ ಓದಿ: ಭದ್ರಾವತಿಯಲ್ಲಿ ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ – ಪ್ರಕರಣ ದಾಖಲು

ಚಾಕುವಿನಿಂದ ಹೊಟ್ಟೆ, ಕೈಗೆ ತಿವಿಯಲಾಗಿದ್ದು, ಗಂಭೀರವಾಗಿ ಗಾಯಗೊಂಡ ಮನೋಜ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆತನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್‌ಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಹಲ್ಲೆ ಸಂಬಂಧ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಆರೋಪ – ನೇಣು ಬಿಗಿದು ಕಾನ್‌ಸ್ಟೇಬಲ್ ಪತ್ನಿ ಆತ್ಮಹತ್ಯೆ

[ad_2]

Source link publictv.in

Leave a Reply

Your email address will not be published. Required fields are marked *