Advertisement

ಕಪ್ಪೆಚಿಪ್ಪು ಸಂಗ್ರಹಿಸಲು ನದಿಗಳಿದಿದ್ದ 8 ಮಂದಿ ಸಾವು

[ad_1]

ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪ ಭಾನುವಾರ ಅತ್ಯಂತ ದಾರುಣ ಘಟನೆಯೊಂದು ಸಂಭವಿಸಿದ್ದು, ಕಳಿನಟ್ಟಿ ಹೊಳೆಯಲ್ಲಿ ಕಪ್ಪೆ ಚಿಪ್ಪು (ಚಪ್ಪೆಕಲ್ಲು) ಆರಿಸಲು ಇಳಿದಿದ್ದ ಎಂಟು ಮಂದಿ ನದಿಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. 

ಲಕ್ಷ್ಮಿ ಮಾದೇವ ನಾಯ್ಕ (38), ಲಕ್ಷ್ಮಿ ಮಹಾದೇವ ನಾಯ್ಕ, ಲಕ್ಷ್ಮಿ ಶಿವರಾಂ ನಾಯ್ಕ (39), ಉಮೇಶ್ ಮಂಜುನಾಥ್ ನಾಯ್ಕ (42), ಮಾಸ್ತಮ್ಮ ಮಂಜುನಾಥ್ (43), ಲಕ್ಷ್ಮಿ ಅಣ್ಣಪ್ಪನಾಯ್ಕ (44), ಜ್ಯೋತಿ ನಾಗಪ್ಪ ನಾಯ್ಕ (37), ಮಾಲತಿ ಜಟ್ಟಪ್ಪ ನಾಯ (38) ಮೃತ ದುರ್ದೈವಿಗಳು. ಎಲ್ಲರೂ ಭಟ್ಕಳದ ಪಡುಶಿರಾಲಿ ಮೂಲದವರು. ಹಾಗೂ ಒಂದೇ ಕುಟುಂಬದವರು ಎಂಬ ಮಾಹಿತಿ ಲಭ್ಯವಾಗಿದೆ.

ಸುರಕ್ಷತೆಯ ದೃಷ್ಟಿಯಿಂದ ಇವರೆಲ್ಲರೂ ಪರಸ್ಪರ ಕೈ ಹಿಡಿದುಕೊಂಡು ಸಾಗುತ್ತಿದ್ದರು ಎನ್ನಲಾಗಿದೆ. ಆದರೆ, ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಹೆಚ್ಚಾಗಿತ್ತು. ಇದರ ಜೊತೆಗೆ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗಿದ್ದರಿಂದ ನದಿಯ ನೀರಿನ ಮಟ್ಟ ದಿಢೀರನೆ ಏರಿಕೆಯಾಗಿದೆ. ಪರಿಣಾಮವಾಗಿ, ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಇವರೆಲ್ಲರೂ ಮುಳುಗಿದ್ದಾರೆ ಎಂದು ಶಂಕಿಸಲಾಗಿದೆ.ಇಬ್ಬರ ರಕ್ಷಣೆ – ಕಣ್ಮರೆಯಾದವರಿಗಾಗಿ ಹುಡುಕಾಟಈ ಭೀಕರ ದುರಂತದಲ್ಲಿ ನಾಗರತ್ನಾ ಮತ್ತು ಮಹಾದೇವಿ ಎಂಬ ಇಬ್ಬರು ಮಹಿಳೆಯರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಭಟ್ಕಳ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಭಟ್ಕಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ಕಪ್ಪೆಚಿಪ್ಪು ಸಂಗ್ರಹಿಸಲು ನದಿಗಳಿದಿದ್ದ 8 ಮಂದಿ ಸಾವು appeared first on Hosakananda.

[ad_2]

Source link

Leave a Reply

Your email address will not be published. Required fields are marked *