Advertisement

ಡೀಸೆಲ್ ಬೆಲೆಯಲ್ಲಿ ತಲಾ 2 ರೂ. ಏರಿಕೆ

[ad_1]

ವಾಹನ ಸವಾರರಿಗೆ ಬೆಳ್ಳಂಬೆಳಗ್ಗೆ ಶಾಕ್ ಎದುರಾಗಿದ್ದು, ಇಂದು ಅಂದರೆ ಸೋಮವಾರ (ಮೇ 25) ಪೆಟ್ರೋಲ್‌ 2.61 ರೂ. ಮತ್ತು ಡೀಸೆಲ್ 2.71 ರೂ. ಏರಿಕೆಯಾಗಿದೆ. ಇದರಿಂದ ಎರಡೇ ವಾರದಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ. 

ಪ್ರತಿ ಲೀಟರ್ ಡೀಸೆಲ್ ದರದಲ್ಲಿ ₹2.71 ಹಾಗೂ ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ ₹2.61 ರಷ್ಟು ಹೆಚ್ಚಳ ಮಾಡಲಾಗಿದೆ. ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 110.89 ರೂ. ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 98.80 ರೂ. ಆಗಿದೆ. ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆ ಮೇ 15ರಿಂದ ಈಚೆಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ದರವನ್ನು ಹೆಚ್ಚಿಸಿವೆ.

ನಿರಂತರವಾಗಿ ಏರುತ್ತಿರುವ ಇಂಧನ ದರಗಳು ಸಾರ್ವಜನಿಕರು ಹಾಗೂ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯ ಆತಂಕವನ್ನು ಮೂಡಿಸಿದೆ.

 

banner

 



[ad_2]

Source link

Leave a Reply

Your email address will not be published. Required fields are marked *