Advertisement

ರಾಜಕೀಯಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಜಾಹ್ನವಿ

[ad_1]

ನಟಿ, ನಿರೂಪಕಿ ಹಾಗೂ ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ.

ಕಿರುತೆರೆ ನಿರೂಪಕಿ, ನಟಿ ಹಾಗೂ ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ ಜಾಹ್ನವಿ ಅವರು ಪ್ರಾದೇಶಿಕ ಪಕ್ಷವಾದ ಜನತಾದಳ (ಜಾತ್ಯತೀತ) ಸೇರ್ಪಡೆಯಾಗುವ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ನಡೆದ ಪಕ್ಷದ ವಿಶೇಷ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ನಟಿಗೆ ಜೆಡಿಎಸ್ ಶಾಲು ಹಾಕಿ, ಪಕ್ಷದ ಬಾವುಟ ನೀಡಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಮಾಜಿ ಮುಖ್ಯಮಂತ್ರಿ, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿರುವ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದೇನೆ. ನನ್ನ ಈ ಬೆಳವಣಿಗೆಗೆ ರಾಜ್ಯದ ಜನರ ಆಶೀರ್ವಾದವೇ  ಕಾರಣ.  ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ 12 ವರ್ಷ ನ್ಯೂಸ್ ಆಂಕರ್ ಆಗಿ ಸೇವೆ ಸಲ್ಲಿಸಿದ್ದೆ. ಇದು ವೃತ್ತಿ ಜೀವನದ ಮೊದಲ ಪಯಣ. ಬಳಿಕ ಕಲರ್ಸ್ ಕನ್ನಡ ವಾಹಿನಿಯಿಂದ ಜೀವನದ ಎರಡನೇ ಅಧ್ಯಾಯ ಆರಂಭ ವಾಯಿತು. ರಿಯಾಲಿಟಿ ಶೋ, ಆಂಕರ್, ಬಿಗ್‌ಬಾಸ್‌ನಲ್ಲಿ ಸ್ಪರ್ಧಿಯಾಗಿ ಆಗಮಿಸಿದ್ದೆ. ಈಗ ಮೂರನೇ ಅಧ್ಯಾಯ ರಾಜಕೀಯ ಪಯಣಕ್ಕೆ ಕಾಲಿಟ್ಟಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.



[ad_2]

Source link

Leave a Reply

Your email address will not be published. Required fields are marked *