[ad_1]
2
ಮಾಡೆಲ್ ಮತ್ತು ನಟಿ ತ್ವಿಷಾ ಶರ್ಮಾ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಸುಪ್ರೀಂಕೋರ್ಟ್ ಸ್ವಯಂಪ್ರೇರಿತ (Suo Motu) ವಿಚಾರಣೆ ನಡೆಸಿದ್ದು, ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (CBI) ಒಪ್ಪಿಸಲು ಒಪ್ಪಿಗೆ ಸೂಚಿಸಿದೆ.


ಮಾಡೆಲ್ ತ್ವಿಶಾ ಶರ್ಮಾ(Twisha Sharma) ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಳ್ಳಲಿದ್ದು, ಇಂದೇ ಅದಕ್ಕೆ ಬೇಕಾದ ಆಡಳಿತಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ಖಚಿತಪಡಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಾಂಚೋಲಿ ಅವರಿದ್ದ ಪೀಠವು ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಸಂತ್ರಸ್ತೆಯ ಪತಿ ಸಮರ್ಥ್ ಸಿಂಗ್ ವಕೀಲರಾಗಿದ್ದು, ಆಕೆಯ ಅತ್ತೆ ಗಿರಿಬಾಲಾ ಸಿಂಗ್ ಮಾಜಿ ಜಿಲ್ಲಾ ನ್ಯಾಯಾಧೀಶರಾಗಿದ್ದಾರೆ. ಆರೋಪಿಗಳು ಕಾನೂನು ಹಿನ್ನೆಲೆಯುಳ್ಳ ಪ್ರಭಾವಿಗಳಾಗಿರುವುದರಿಂದ ಸ್ಥಳೀಯ ಮಟ್ಟದಲ್ಲಿ ತನಿಖೆಯ ಪಕ್ಷಪಾತ ನಡೆಯುವ ಸಾಧ್ಯತೆ ಇದೆ ಎಂಬ ನಿರೂಪಣೆಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ಮಹತ್ವದ ಕ್ರಮ ಕೈಗೊಂಡಿದೆ.
ಏನಿದು ಪ್ರಕರಣ?
2012ರಲ್ಲಿ ‘ಮಿಸ್ ಪುಣೆ’ ಕಿರೀಟ ಮುಡಿಗೇರಿಸಿಕೊಂಡಿದ್ದ ತ್ವಿಷಾ ಶರ್ಮಾ, ನೋಯ್ಡಾದಲ್ಲಿ ಕಾರ್ಪೊರೇಟ್ ವೃತ್ತಿಜೀವನ ನಡೆಸುತ್ತಿದ್ದರು. ಕಳೆದ ಐದು ತಿಂಗಳ ಹಿಂದೆಯಷ್ಟೇ ಅವರು ಭೋಪಾಲ್ ಮೂಲದ ವಕೀಲ ಸಮರ್ಥ್ ಸಿಂಗ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಮದುವೆಯ ಆರಂಭದ ದಿನಗಳಲ್ಲಿ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಕಳೆದ ಮಂಗಳವಾರ (ಮೇ 12) ರಾತ್ರಿ ತ್ವಿಷಾ ಶರ್ಮಾ ಸಾವನ್ನಪ್ಪಿದ್ದಾರೆ.
ಟ್ವಿಶಾ ಎಂಬಿಎ ಪದವೀಧರೆಯಾಗಿದ್ದು, ಮದುವೆಯ ನಂತರ ಸಂಸಾರಕ್ಕಾಗಿ ಕೆಲಸ ಬಿಟ್ಟು ಭೋಪಾಲ್‌ಗೆ ಬಂದಿದ್ದರು. ಟ್ವಿಷಾ ಅವರ ಅತ್ತೆ ಕೋರ್ಟಿನ ನಿವೃತ್ತ ಜಡ್ಜ್ ಆಗಿದ್ದು ಪತಿ ವಕೀಲರಾಗಿದ್ದಾರೆ. ಆದರೆ ಪತಿ ಮತ್ತು ಅತ್ತೆ ಕಡೆಯಿಂದ ಮತ್ತೆ ಕೆಲಸಕ್ಕೆ ಸೇರುವಂತೆ ನಿರಂತರ ಒತ್ತಡ ಇತ್ತೆಂದು ಹೇಳಲಾಗಿದೆ. ಇದರ ಜೊತೆಗೆ, ಟ್ವಿಶಾ ಅನಿರೀಕ್ಷಿತವಾಗಿ ಗರ್ಭಿಣಿಯಾಗಿದ್ದರು. ಆದರೆ ಅವರು ಆ ಹಂತದಲ್ಲಿ ತಾಯಿಯಾಗಲು ಮಾನಸಿಕವಾಗಿ ಸಿದ್ಧರಿರಲಿಲ್ಲ. ಇದೇ ವಿಷಯವಾಗಿ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡಿದ್ದವು ಮತ್ತು ಇದು ಅವರ ಸಾವಿಗೆ ಕಾರಣವಾಗಿರಬಹುದು ಎಂದು ಕುಟುಂಬಸ್ಥರು ದೂರಿದ್ದಾರೆ. Alladee ತ್ವಿಷಾ ಕುಟುಂಬಸ್ಥರು ಅತ್ತೆ-ಮಾವನ ವಿರುದ್ಧ ನಿರಂತರ ಕೌಟುಂಬಿಕ ಹಿಂಸೆ ಮತ್ತು ವರದಕ್ಷಿಣೆ ಕಿರುಕುಳದ ಗಂಭೀರ ಆರೋಪ ಹೊರಿಸಿದ್ದಾರೆ.
ಸ್ಥಳೀಯ ಪೊಲೀಸರು ಮೂರು ದಿನಗಳ ಕಾಲ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಮತ್ತು ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ ಎಂದು ಸಂತ್ರಸ್ತರ ಪರ ವಕೀಲ ಸಿದ್ಧಾರ್ಥ್ ಲೂತ್ರಾ ವಾದಿಸಿದರು. ಸಾವಿನ ನಿಜವಾದ ಕಾರಣ ತಿಳಿಯಲು ಎರಡನೇ ಮರಣೋತ್ತರ ಪರೀಕ್ಷೆಗೆ ಕುಟುಂಬಸ್ಥರು ಒತ್ತಾಯಿಸಿದ್ದರು. ಮಧ್ಯಪ್ರದೇಶ ಹೈಕೋರ್ಟ್ ನಿರ್ದೇಶನದ ಮೇರೆಗೆ ಭೋಪಾಲ್‌ನ ಏಮ್ಸ್ (AIIMS) ವೈದ್ಯರ ತಂಡವು ನಿನ್ನೆ ಮೃತದೇಹದ ಎರಡನೇ ಶವಪರೀಕ್ಷೆ ನಡೆಸಿದೆ.
ಪ್ರಸ್ತುತ, ಪತಿ ಸಮರ್ಥ್ ಸಿಂಗ್ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಿದ್ದು, ಆತನನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅತ್ತೆ ಮಾಜಿ ನ್ಯಾಯಾಧೀಶೆ ಗಿರಿಬಾಲಾ ಸಿಂಗ್‌ಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಮಧ್ಯಪ್ರದೇಶ ಪೊಲೀಸರು ಹೈಕೋರ್ಟ್ ಅನ್ನು ಸಂಪರ್ಕಿಸಿದ್ದಾರೆ. ದೇಶದ ಪ್ರಮುಖ ಸಂಸ್ಥೆಯಾದ ಸಿಬಿಐ ತನಿಖೆಯನ್ನು ನಂಬುವಂತೆ ಮತ್ತು ಊಹಾಪೋಹಗಳಿಂದ ದೂರವಿರುವಂತೆ ಸುಪ್ರೀಂ ಕೋರ್ಟ್ ಸಾರ್ವಜನಿಕರಲ್ಲಿ ವಿನಂತಿಸಿದೆ.
[ad_2]
Source link


















Leave a Reply