[ad_1]
ಸೋಮಂತಡ್ಕ ಅಗರಿ ಕ್ರಾಸ್ ಬಳಿ ಮೇ 24 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಥಳೀಯ ಫೋಟೋಗ್ರಾಫರ್ ಗಣೇಶ್ ಗೌಡ (36) ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ
ಮೇ 24 ರಂದು ಗಣೇಶ್ ಗೌಡ ಅವರು ತಮ್ಮ ಬೈಕ್‌ನಲ್ಲಿ ಉಜಿರೆಯಿಂದ ಕಕ್ಕಿಂಜೆ ಕಡೆಗೆ ತೆರಳುತ್ತಿದ್ದರು. ಸೋಮಂತಡ್ಕದ ಅಗರಿ ಕ್ರಾಸ್ ಬಳಿ ತಲುಪುತ್ತಿದ್ದಂತೆ ಎದುರಿನಿಂದ ಬಂದ ಕಾರೊಂದರ ನಡುವೆ ಇವರ ಬೈಕ್ ಮುಖಾಮುಖಿ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಗಣೇಶ್ ಅವರು ಬೈಕ್‌ನಿಂದ ರಸ್ತೆಗೆ ಎಸೆಯಲ್ಪಟ್ಟು, ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು.
ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣವೇ ಅವರನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
The post ಕಾರು-ಬೈಕ್ ಅಪಘಾತ -ಚಿಕಿತ್ಸೆ ಫಲಕಾರಿಯಾಗದೇ ಯುವ ಫೋಟೋಗ್ರಾಫರ್ ಸಾವು!! appeared first on Hosakananda.
[ad_2]
Source link

















Leave a Reply