Advertisement

ನಿದ್ರೆಗೆ ಜಾರಿದ ಚಾಲಕ, ಬಸ್ ಪಲ್ಟಿ – ಪೊಲೀಸ್ ಅಧಿಕಾರಿ ಸೇರಿ 6 ಮಂದಿ ಸಾವು, 21 ಮಂದಿಗೆ ಗಾಯ

[ad_1]

UP Accident

ಲಕ್ನೋ: ಉತ್ತರ ಪ್ರದೇಶದ (Uttara Pradesh) ಉನ್ನಾವೋ ಜಿಲ್ಲೆಯಲ್ಲಿ ಮಂಗಳವಾರ (ಇಂದು) ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಎಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ.

ಉನ್ನಾವೋ (Unnao) ಜಿಲ್ಲೆಯ ಔರಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ನಿಭಾ ಖೇಡಾ ಗ್ರಾಮದ ಸಮೀಪ, ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ ವೇಯಲ್ಲಿ ಬೆಳಗ್ಗೆ ಸುಮಾರು 5:15ರ ವೇಳೆಗೆ ಅಪಘಾತ ನಡೆದಿದೆ. ಬಸ್‌ನಲ್ಲಿ ಸುಮಾರು 50 ಪ್ರಯಾಣಿಕರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಕ್ರೀದ್‌ ಕುರ್ಬಾನಿಗೆ ಮಾರಾಟವಾದ ಡೊನಾಲ್ಡ್ ಟ್ರಂಪ್ ಹೆಸರಿನ ಎಮ್ಮೆ – ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!

ಪೋಲಿಸ್ ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಅತಿವೇಗದಲ್ಲಿ ಸಂಚರಿಸುತ್ತಿದ್ದು, ಈ ವೇಳೆ ಚಾಲಕ ನಿದ್ರೆಗೆ ಜಾರಿದ್ದಾನೆ. ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕೆಲ ಪ್ರಯಾಣಿಕರು ಕಿಟಕಿಗಳ ಮೂಲಕ ಹೊರಗೆ ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರು ಪೊಲೀಸ್ ಸಿಬ್ಬಂದಿ ಸೇರಿ ಹಲವರನ್ನ ಲಖ್ನೋ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಮೃತರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದುರ್ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು  ಪ್ರಾರ್ಥಿಸಿದ್ದಾರೆ.ಇದನ್ನೂ ಓದಿ: ಸುವೇಂದು ಖಡಕ್ ಆಕ್ಷನ್ ಬೆನ್ನಲ್ಲೇ ಸ್ವದೇಶಕ್ಕೆ ಓಡುತ್ತಿದ್ದಾರೆ ಅಕ್ರಮ ಬಾಂಗ್ಲಾ ಪ್ರಜೆಗಳು!


[ad_2]

Source link publictv.in

Leave a Reply

Your email address will not be published. Required fields are marked *