Advertisement

ಡಿ.ಕೆ.ಶಿವಕುಮಾರ್‌ ಸಿಎಂ: ಪೋಸ್ಟರ್‌ ಅಭಿಯಾನ ಆರಂಭ

[ad_1]

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಖಚಿತಗೊಂಡಿದ್ದು, ನಾಳೆ ಗುರುವಾರ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಈ ಸುದ್ದಿ ವೈರಲ್‌ ಬೆನ್ನಲ್ಲೇ ಜಾಲತಾಣಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಪೋಸ್ಟರ್‌ ಅಭಿಯಾನ ಆರಂಭವಾಗಿದೆ.

ʼಟೀಮ್‌ ಡಿಕೆʼ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ಈ ಅಭಿಯಾನ ನಡೆಯುತ್ತಿದ್ದು, ಡಿ.ಕೆ.ಶಿವಕುಮಾರ್‌ ಅವರ 45 ವರ್ಷಗಳ ರಾಜಕೀಯ ಅನುಭವ ಮತ್ತು ತಳಮಟ್ಟದಿಂದ ಬೆಳೆದು ಬಂದ ಹಾದಿಯನ್ನು ಉಲ್ಲೇಖ ಮಾಡಿ, ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ಸೂಕ್ತರು ಎಂದು ಪ್ರಚಾರ ಮಾಡಲಾಗುತ್ತಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದ್ದು, ಇದರ ನಡುವೆ ಡಿ.ಕೆ.ಶಿವಕುಮಾರ್‌ ಪರ ಪೋಸ್ಟರ್‌ ಅಭಿಯಾನ ಆರಂಭವಾಗಿದೆ.



[ad_2]

Source link

Leave a Reply

Your email address will not be published. Required fields are marked *