Advertisement

ನಾಳೆ ಬೆಳಗ್ಗೆ 11:30ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | Public TV

[ad_1]

ಬೆಂಗಳೂರು: ಸಿದ್ದರಾಮಯ್ಯ ನಾಳೆ ಬೆಳಗ್ಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಧಿಕೃತವಾಗಿದೆ.

ಸಿದ್ದರಾಮಯ್ಯ ನಾಳೆ ರಾಜೀನಾಮೆ ನೀಡುವುದು ಅಧಿಕೃತವಾಗಿದ್ದರೂ ಯಾವಾಗ ರಾಜೀನಾಮೆ ನೀಡುತ್ತಾರೆ ಎನ್ನುವ ಪ್ರಶ್ನೆ ಎದ್ದಿತ್ತು. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಾಳೆ ಬೆಳಗ್ಗೆ 11:30ಕ್ಕೆ ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ನೀಡುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿದೆ.

ರಾಜೀನಾಮೆ ನೀಡುವ ಮೊದಲು ಸಿದ್ದರಾಮಯ್ಯ ತಮ್ಮ ಮಂತ್ರಿಗಳಿಗೆ ಮತ್ತು ಆಪ್ತ ಶಾಸಕರಿಗೆ ಉಪಹಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಈ ಬ್ರೇಕ್‌ಫಾಸ್ಟ್‌ ಸಭೆಯ ಬಳಿಕ ಸಿಎಂ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡ್ತಾರೋ ಗೊತ್ತಿಲ್ಲ: ಶೋಭಾ ಕರಂದ್ಲಾಜೆ

 

ಇಂದು ಮಾಜಿ ಪ್ರಧಾನಿ ಜವಹರಲಾಲ್ ನೆಹರೂ ಅವರ 62ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಿದ್ದರು. ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದ ಬಳಿಕ ನೆಹರೂ ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಕೊಂಡಾಡಿದರು.

ಈ ವೇಳೆ ಮಾಧ್ಯಮಗಳು ರಾಜ್ಯ ರಾಜಕೀಯದ ಸದ್ಯದ ಬೆಳವಣಿಗೆಗಳು, ದೆಹಲಿ ಪ್ರವಾಸದ ಬಗ್ಗೆ ಪ್ರಶ್ನಿಸಿದಾಗ ಮುಖ್ಯಮಂತ್ರಿಗಳು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ರಾಜಕೀಯ ವಿದ್ಯಮಾನಗಳ ಕುರಿತು ಕೇಳಿದಾಗ, “ನಾಳೆ ಮಾತನಾಡುತ್ತೇನೆ, ಏನೇ ಇದ್ದರೂ ನಾಳೆಯೇ ಮಾತನಾಡುತ್ತೇನೆ” ಎಂದು ಕೇವಲ ಒಂದೇ ಸಾಲಿನಲ್ಲಿ ಉತ್ತರಿಸಿ ಸಿದ್ದರಾಮಯ್ಯ ಅವರು ಅಲ್ಲಿಂದ ಹೊರಟು ಹೋಗಿದ್ದರು.

[ad_2]

Source link publictv.in

Leave a Reply

Your email address will not be published. Required fields are marked *