Advertisement

ಪೋಸ್ಟ್ ಮೂಲಕ ನಾಡಿನ ಜನತೆಗೆ ಸಿದ್ದರಾಮಯ್ಯ ಭಾವುಕ ಸಂದೇಶ !!

[ad_1]

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆಯುತ್ತಿದ್ದು ನಾಳೆ ಅಂದರೆ ಗುರುವಾರ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಪೋಸ್ಟ್ ಒಂದನ್ನು ಹಾಕಿಕೊಂಡಿದ್ದು ಇದು ಜನತೆಗೆ ಭಾವುಕ ವಿದಾಯ ಹೇಳಿರುವುದೇ ಎಂಬ ದಟ್ಟಣೆ ಎದುರಾಗಿದೆ.

ಮುಖ್ಯಮಂತ್ರಿಗಳು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ರಾಜ್ಯದ ಜನತೆಯನ್ನುದ್ದೇಶಿಸಿ ಸುದೀರ್ಘ ಹಾಗೂ ಭಾವನಾತ್ಮಕ ವಿದಾಯದ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

“ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ‌ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ. ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ.”

“ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಪೌಷ್ಟಿಕ ಆಹಾರದ ಭದ್ರತೆ ನೀಡುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಆಧಾರವಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಿಸಲು ಈವರೆಗೆ 18,897 ಕೋಟಿ ರೂ. ವ್ಯಯಿಸಲಾಗಿದ್ದು, 4.26 ಕೋಟಿ ಪಡಿತರದಾರರು ಮೂರು ಹೊತ್ತು ನೆಮ್ಮದಿಯಿಂದ ಊಟ ಮಾಡುತ್ತಿದ್ದಾರೆ” 

banner

“ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಜಾರಿಗೊಳಿಸಿ, ರಾಜ್ಯದ ಪ್ರತಿಯೊಂದು ಮನೆಗೂ ತಲುಪಿಸುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದೆ” ಎಂದು ಸಿದ್ದರಾಮಯ್ಯ ಅವರು ಬರೆದುಕೊಂಡಿದ್ದಾರೆ. ಇದು ಸಿದ್ದರಾಮಯ್ಯ ಪರೋ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ ಎಂಬುದಕ್ಕೆ ಪುಷ್ಟಿಕೊಡುವಂತಿದೆ.



[ad_2]

Source link

Leave a Reply

Your email address will not be published. Required fields are marked *