Advertisement

ರಸ್ತೆಬದಿ ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ – ಒಂದೇ ಕುಟುಂಬದ ಐವರು ದುರ್ಮರಣ

[ad_1]

Chitradurga Accident

ಚಿತ್ರದುರ್ಗ: ರಸ್ತೆಬದಿ ನಿಂತಿದ್ದ ಲಾರಿಗೆ (Lorry) ಬೊಲೆರೋ (Bolero) ಡಿಕ್ಕಿಯಾಗಿ ಸ್ಥಳದಲ್ಲೇ ಐವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಮೊಳಕಾಲ್ಮೂರು (Molakalmuru) ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಬುಲೆರೋ ವಾಹನ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ, ವಾಹನದಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಬಳ್ಳಾರಿ ಮೂಲದವರು. ವೆಂಕಟೇಶ್ (28), ಶಿವಮ್ಮ (25), ಮೀನಾಕ್ಷಿ (16), ಪೂಜಾ (4), ಪರುಶುರಾಮ (1.5) ಮೃತರು. ಗಾಯಾಳುಗಳನ್ನು ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯ ಪ್ರತಿಯೊಬ್ಬ ಕನ್ನಡಿಗನಿಗೆ ಅರ್ಪಣೆ: ಸಿದ್ದರಾಮಯ್ಯ

ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: 10 ಲಕ್ಷ ಹಣ, ಸ್ಕಾರ್ಪಿಯೋ ಕಾರಿಗಾಗಿ ಕಿರುಕುಳ – ಮದುವೆಯಾದ 6 ತಿಂಗಳಲ್ಲೇ ಗೃಹಿಣಿ ಆತ್ಮಹತ್ಯೆ


[ad_2]

Source link publictv.in

Leave a Reply

Your email address will not be published. Required fields are marked *