Advertisement

ಬೆಳಗಾವಿ| ಎಸ್‌ಡಿಆರ್‌ಎಫ್‌ ಸಿಪಿಐ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

[ad_1]

SDRF CPI suicide

ಬೆಳಗಾವಿ: ಎಸ್‌ಡಿಆರ್‌ಎಫ್‌ ಸಿಪಿಐ (SDRF CPI) ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

ಸಿಪಿಐ ಶ್ರೀಶೈಲ ಚೌಗಲೆ (37) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಬೆಳಗಾವಿಯ ಚನ್ನಮ್ಮ ನಗರದ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ಪ್ರೇಯಸಿ ಮನೆಗೆ ಹೋಗಿ ಪತಿಗೆ ಸಿಕ್ಕಿಬಿದ್ದ ಯುವಕನ ಬರ್ಬರ ಹತ್ಯೆ

ಮನೆಯ ರೂಮ್‌ ಬಾಗಿಲು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಘಟನೆ ಸಂಬಂಧ ಎಸ್‌ಡಿಆರ್‌ಎಫ್‌ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ ರೂಮ್‌ ಬಾಗಿಲು ಮುರಿದು ಆಸ್ಪತ್ರೆಗೆ ರವಾನೆ ಮಾಡಿದರು.

ಶ್ರೀಶೈಲ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಬೆಳಗಾವಿ ಬೀಮ್ಸ್‌ ಶವಾಗಾರಕ್ಕೆ ರವಾನಿಸಲಾಗಿದೆ. ನಗರದ ಉದ್ಯಮಬಾಗ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

[ad_2]

Source link publictv.in

Leave a Reply

Your email address will not be published. Required fields are marked *