Advertisement

ಲೋಕಭವನಕ್ಕೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್‌ – ಇಂದೇ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ ಸಾಧ್ಯತೆ

[ad_1]

Thawar Chand Gehlot

ಬೆಂಗಳೂರು: ಲೋಕಭವನಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಆಗಮಿಸಿದ್ದಾರೆ. ಇಂದೋರ್‌ನಿಂದ ಅವರು ಬೆಂಗಳೂರಿಗೆ ಆಗಮಿಸಿದ್ದು, ಇಂದೇ ಸಿದ್ದರಾಮಯ್ಯ ಅವರ ರಾಜೀನಾಮೆ ಅಂಗೀಕಾರಿಸುವ ಸಾಧ್ಯತೆ ಇದೆ.

ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ ಮತ್ತು ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ (Resignation) ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆಯಿಂದ ಕಾಂಗ್ರೆಸ್‌ಗೆ ಮುಂದಿನ ಚುನಾವಣೆಯಲ್ಲಿ ಪೆಟ್ಟು: ಯತ್ನಾಳ್‌

ಡಿಸಿಎಂ ಆಗಿದ್ದ ಡಿಕೆ ಶಿವಕುಮಾರ್ (DK Shivakumar) ನಿರೀಕ್ಷೆಯಂತೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ. ಯಾವುದೇ ಗೊಂದಲ, ಗೋಜಲು, ಗುದ್ದಾಟ, ತಿಕ್ಕಾಟಕ್ಕೆ ಸಿದ್ದರಾಮಯ್ಯ ಆಸ್ಪದ ಕೊಡದೇ ಗೌರವಪೂರ್ವಕವಾಗಿ ಅಧಿಕಾರ ತ್ಯಜಿಸಿದ್ದಾರೆ. ಯಾರೂ ನಿರೀಕ್ಷಿಸದಂಥ ಬೆಳವಣಿಗೆಗೆ ಸಿದ್ದರಾಮಯ್ಯ ಸಾಕ್ಷಿಯಾಗಿದ್ದಾರೆ. ಎಲ್ಲೂ ಬೇಸರ, ಅಸಮಾಧಾನ ವ್ಯಕ್ತಪಡಿಸದೇ ಮುಖ್ಯಮಂತ್ರಿ (Chief Minister) ಹುದ್ದೆಯನ್ನ ಪದತ್ಯಾಗ ಮಾಡಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ಪ್ರಹಸನಕ್ಕೆ ತೆರೆ ಬಿದ್ದಿದೆ.

ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರು ಮೇ 29 ರ ಬೆಳಗ್ಗೆ 9 ಗಂಟೆಗೆ ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ʻಪವರ್ ಹೌಸ್‌ʼ ಆಯ್ತು ಡಿಕೆಶಿ ನಿವಾಸ!

[ad_2]

Source link publictv.in

Leave a Reply

Your email address will not be published. Required fields are marked *